ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್.

50
firstsuddi

ಬೆಂಗಳೂರು : ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಇಂದು ನಗರಕ್ಕೆ ಆಗಮಿಸಿದರು. ವಾಯುಪಡೆಯ ವಿಶೇಷ ವಿಮಾನದಲ್ಲಿ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿಯವರನ್ನು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಇಂದು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ. ನಾಳೆ ಕನಕಪುರ ರಸ್ತೆಯ ವಸಂತಪುರ ಸಮೀಪದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯವನ್ನು ಉದ್ಘಾಟನೆ ಮಾಡಲಿದ್ದಾರೆ.