ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಿ ; ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದ ಸುಪ್ರೀಂ…

95
firstsuddi

ನವದೆಹಲಿ: ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕೆಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಕೋವಿಡ್- 19 ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ಆಮ್ಲಜನಕ ಹಂಚಿಕೆಯನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು. ಇದನ್ನು ಒಪ್ಪದ ಕೇಂದ್ರವು, ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದವನ್ನು ಮಂಡಿಸಿದ್ದರು.

ಇದೀಗ ಇಂದು ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದವನ್ನು ನಿರಾಕರಿಸಿದೆ. ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಕರ್ನಾಟಕದ ನಾಗರಿಕರು ಪರದಾಡಲು ಬಿಡುವುದಿಲ್ಲ. ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ನೀಡಲೇಬೇಕು ಎಂದು ಕೇಂದ್ರಕ್ಕೆ ಸೂಚಿಸಿದೆ.