ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ಎರಡನೇ ಹಂತದಲ್ಲಿ 1869.85 ಕೋಟಿ ನೆರೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ನಿನ್ನೆ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಕ್ಕೂ ಮೊದಲು ಮೊದಲ ಕಂತಿನಲ್ಲಿ 1200 ಕೋಟಿ ರೂ ಬಿಡುಗಡೆ ಮಾಡಲಾಗಿತ್ತು. ಈಗಾ ಕೇಂದ್ರ ಸರ್ಕಾರ ಎನ್‍ಡಿಆರ್‍ಎಫ್ ಅಡಿಯಲ್ಲಿ ರಾಜ್ಯಕ್ಕೆ 1869.85 ಕೋಟಿ ರೂ ಬಿಡುಗಡೆ ಮಾಡಿದ್ದು, ಒಟ್ಟು ರಾಜ್ಯಕ್ಕೆ 3069.85 ಕೋಟಿ ರೂ ಬಿಡುಗಡೆ ಮಾಡಿದಂತಾಗಿದೆ. ಕೇಂದ್ರ ಸರ್ಕಾರ ಒಟ್ಟು ಏಳು ರಾಜ್ಯಗಳಿಗೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಒಟ್ಟು 5908.56 ಕೋಟಿ ರೂ ಬಿಡುಗಡೆ ಮಾಡಿದೆ.










