ರಾಜ್ಯದಲ್ಲಿ ಇಂದು ಒಂದೇ ದಿನ 216 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆ…

227
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 216 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಬೆಳಗ್ಗಿನ ಹೆಲ್ತ್ ಬುಲೆಟಿನ್‍ನಲ್ಲಿ 196 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢವಾಗಿತ್ತು. ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ 20 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.