ರಾಜ್ಯದಲ್ಲಿ ಇಂದು ಒಂದೇ ದಿನ 29 ಮಂದಿಗೆ ಕೊರೊನಾ ಸೋಂಕು ದೃಢ-ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ…

131
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 29 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆಯಾಗಿದೆ. ಇಂದು ಬೆಳಿಗ್ಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್‍ನಲ್ಲಿ 18 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಈಗಾ ಮತ್ತೆ ಸರ್ಕಾರ ಹೊಸ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಈಗಾ 11 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢವಾಗಿದೆ. ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ ಬೆಂಗಳೂರು-8, ಬಾಗಲಕೋಟೆ, ಮಂಡ್ಯ ಹಾಗೂ ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.