ರಾಜ್ಯದಲ್ಲಿ ಇಂದು-ನಾಳೆ ಭಾರೀ ಮಳೆಯಾಗುವ ಸಾಧ್ಯತೆ ; ಹಲವೆಡೆ ಆರೆಂಜ್ ಅಲರ್ಟ್…

117
firstsuddi

ಬೆಂಗಳೂರು : ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಈ ಕುರಿತು ಮಾತನಾಡಿರುವ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಅವರು, ಇಂದಿನಿಂದ ಜೂನ್ 6ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಇಂದು ಆರೆಂಜ್ ಅಲರ್ಟ್ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ, ಹಾವೇರಿ, ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಕೋಲಾರ, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು ಚಾಮರಾಜನಗರದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ನಾಳೆ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಕೊಡಲಾಗಿದ್ದು, ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ.