ರಾಜ್ಯದಲ್ಲಿ ಇಂದು ಹೊಸದಾಗಿ 143 ಕೊರೊನಾ ಪಾಸಿಟಿವ್ ಪತ್ತೆ…

183

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ರಾಜ್ಯದಲ್ಲಿ ಹೊಸದಾಗಿ 143 ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,605ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯಿಂದ ಬಿಡುಗಡೆಯಾದ ಬೆಳಗ್ಗಿನ ಹೆಲ್ತ್ ಬುಲೆಟಿನ್‍ನಲ್ಲಿ ಇಂದು 116 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಹಾಗೂ ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ 27 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ 571 ಮಂದಿ ಸೋಮಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 41 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.