ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 161 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,921ಕ್ಕೆ ಏರಿಕೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಇಬ್ಬರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ನಲ್ಲಿ ಇಂದು ಯಾದಗಿರಿ-61, ಬೆಂಗಳೂರು-29, ದಕ-23, ಕಲಬುರಗಿ-10, ಬೀದರ್-9, ದಾವಣಗೆರೆ-8, ಕೊಪ್ಪಳ-6, ಶಿವಮೊಗ್ಗ-4, ವಿಜಯಪುರ-2, ಚಿಕ್ಕಬಳ್ಳಾಪುರ-2, ಮೈಸೂರು-2 ಧಾರವಾಡ-2, ಬಾಗಲಕೋಟೆ, ತುಮಕೂರು, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 5,921 ಮಂದಿ ಸೋಂಕಿತರ ಪೈಕಿ 2,605 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, 3,248 ಮಂದಿ ಸೋಂಕಿತರು ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.










