ರಾಜ್ಯದಲ್ಲಿ ಇಂದು 213 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 7213 ಕ್ಕೆ ಏರಿಕೆ-ಇಬ್ಬರು ಬಲಿ…

185
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 213 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7213 ಕ್ಕೆ ಏರಿಕೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಇಬ್ಬರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 88ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ಇಂದು ಕಲಬುರಗಿ-48, ಬೆಂಗಳೂರು-35, ಧಾರವಾಡ-34, ದಕ್ಷಿಣ ಕನ್ನಡ-23, ರಾಯಚೂರು-18, ಯಾದಗಿರಿ-13, ಬೀದರ್-11, ಬಳ್ಳಾರಿ-10, ಕೊಪ್ಪಳ-4, ವಿಜಯಪುರ-3, ಬಾಗಲಕೋಟೆ-3,ಶಿವಮೊಗ್ಗ-3, ಉಡುಪಿ-2, ಹಾವೇರಿ-2 ರಾಮನಗರ-2, ಹಾಸನ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 7213 ಮಂದಿ ಸೋಂಕಿತರ ಪೈಕಿ 4135ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, 2987ಮಂದಿ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.