ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 249 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,399 ಕ್ಕೆ ಏರಿಕೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ಸೋಂಕಿಗೆ ಇಂದು 5ಮಂದಿ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನ ಮಾಹಿತಿ ಪ್ರಕಾರ ಬೆಂಗಳೂರು-126, ಕಲಬುರಗಿ-27, ವಿಜಯಪುರ-15, ಉಡುಪಿ-14, ದಕ್ಷಿಣ ಕನ್ನಡ-12, ದಾವಣಗೆರೆ-9, ಉತ್ತರ ಕನ್ನಡ-6, ಬಾಗಲಕೋಟೆ-6, ಬೀದರ್-5, ಚಿಕ್ಕಮಗಳೂರು-5, ಧಾರವಾಡ-4, ಬೆಂಗಳೂರು ಗ್ರಾಮಾಂತರ-4, ರಾಮನಗರ-3, ತುಮಕೂರು-2, ಚಿತ್ರದುರ್ಗ-2, ಕೊಡಗು-2, ಕೋಲಾರ-2, ಯಾದಗಿರಿ, ಮೈಸೂರು, ಗದಗ, ಚಿಕ್ಕಬಳ್ಳಾಪುರ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ 9,399 ಮಂದಿ ಸೋಂಕಿತರ ಪೈಕಿ 5,730 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, 3,523 ಮಂದಿ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.










