ರಾಜ್ಯದಲ್ಲಿ ಇಂದು 9 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ-ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ…

179
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಇಂದು ರಾಜ್ಯದಲ್ಲಿ 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಬಿಡುಗಡೆಯಾದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಕಲಬುರಗಿ ಜಿಲ್ಲೆ ಒಂದರಲ್ಲೇ 8 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಬೆಳಗಾವಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ 532 ಮಂದಿ ಸೋಂಕಿತರ ಪೈಕಿ 215 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 20 ಮಂದಿ ಮೃತಪಟ್ಟಿದ್ದಾರೆ. ಇನ್ನುಳಿದವರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.