ರಾಜ್ಯದಲ್ಲಿ ಓಮಿಕ್ರಾನ್ ಪತ್ತೆ – ಹಿರಿಯ ಅಧಿಕಾರಿಗಳ ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ.

97
firstsuddi

ಬೆಂಗಳೂರು : ರಾಜ್ಯದಲ್ಲಿ ಇಬ್ಬರಿಗೆ ಓಮಿಕ್ರಾನ್ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಪರಿಣತರ ತುರ್ತು ಸಭೆ ಕರೆದಿದ್ದಾರೆ.

ನಿನ್ನೆ ನವದೆಹಲಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ರೂಪಾಂತರದ ಸೋಂಕು ದೃಢಪಟ್ಟಿರುವ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಬೆಂಗಳೂರಿಗೆ ಹಿಂದಿರುಗಿದ ನಂತರ ತಜ್ಞರ ಜತೆ ತುರ್ತು ಸಭೆ ಮಾಡಿ ಚರ್ಚೆ ನಡೆಸುತ್ತೇನೆ. ಕರ್ನಾಟಕದ ಒಮಿಕ್ರಾನ್ ಸ್ಥಿತಿಗತಿಯ ಬಗ್ಗೆ ನಾಳೆ ಸಂಪೂರ್ಣ ವಿವರ ನೀಡುವುದಾಗಿ ಹೇಳಿದ್ದಾರೆ.

ನಾಳೆ ಪರಿಣತರು ಹಾಗೂ ಹಿರಿಯ ಅಧಿಕಾರಿಗಳ ತುರ್ತು ಸಭೆ ಕರೆದಿದ್ದೇನೆ. ಕೇಂದ್ರದ ಪರಿಣತರ ಜೊತೆಗೂ ಈ ಕುರಿತು ಚರ್ಚಿಸಲಾಗುತ್ತದೆ. ಈ ಸಭೆಯಲ್ಲಿ ಹೊಸ ಮಾರ್ಗಸೂಚಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಪ್ರಭೇದದ ಸೋಂಕು ತೀವ್ರ ಸ್ವರೂಪದಲ್ಲ ಎಂದು ತಿಳಿದು ಬಂದಿದೆ ಎಂದು ತಿಳಿಸಿದರು.