ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟ – ಒಂದೇ ದಿನ 23 ಸೋಂಕಿತರು ಪತ್ತೆ…

54
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ಸ್ಫೋಟಗೊಂಡಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 23 ಮಂದಿಗೆ ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ.

ಈ ಕುರಿತು ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಯುಎಸ್ಎ, ಯುರೋಪ್, ಆಫ್ರಿಕಾ ಸೇರಿದಂತೆ ಅನೇಕ ದೇಶಗಳಿಂದ ಬಂದ 19 ಮಂದಿ ಪ್ರಯಾಣಿಕರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಉಳಿದಂತೆ ನಾಲ್ವರು ಸ್ಥಳೀಯರು ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಈಗಾಗಲೇ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಇದರ ಬೆನ್ನಲ್ಲೇ ಓಮಿಕ್ರಾನ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 50 ರ ಗಡಿ ದಾಟಿದೆ.