ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ-62 ವರ್ಷದ ವೃದ್ಧೆ ಸಾವು…

132
firstsuddi

ವಿಜಯಪುರ : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ ಇಂದು ಮತ್ತೊಂದು ಬಲಿಯಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ 62 ವರ್ಷದ ವೃದ್ಧೆ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಮೃತ ವೃದ್ಧೆಗೆ ಸೋಂಕಿತ 228ರ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದ್ದು, ವೃದ್ಧೆ ಈ ಮೊದಲು ಮಧುಮೇಹ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕೊರೊನಾ ಸೋಂಕು ದೃಢವಾದ ಬಳಿಕ ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದು, ಈವರೆಗೆ ವಿಜಯಪುರ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ.