ರಾಜ್ಯದಲ್ಲಿ ಕೊರೊನಾ ಉಲ್ಬಣ ; ಕೊರೊನಾ ನಿಯಂತ್ರಣ ಕುರಿತು ಸಚಿವರೊಂದಿಗೆ ಸಿಎಂ ಬಿಎಸ್‍ವೈ ಸಭೆ…

138
firstsuddi

ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆ ತೀವ್ರವಾಗಿ ಹರಡುತ್ತಿದ್ದು, ದಿನನಿತ್ಯ ಅನೇಕ ಮಂದಿ ಸೋಂಕಿನಿಂದ ಸಾವನ್ನಪ್ಪುತ್ತಿದ್ದಾರೆ. ಸದ್ಯ ಕೊರೊನಾ ಪರಿಸ್ಥಿತಿ, ಕರ್ಫ್ಯೂ ಜಾರಿಯ ಕ್ರಮಗಳ ಬಗ್ಗೆ ಕೋವಿಡ್ ಪರಾಮರ್ಶೆ ಸಭೆಯನ್ನು ಸಿಎಂ ನಿವಾಸ ಕಾವೇರಿಯಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಇಂದು ಸಿಎಂ ಯಡಿಯೂರಪ್ಪನವರು ಸಭೆ ನಡೆಸಿದ್ದಾರೆ. ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ. ಅಶ್ವತ್ಥ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಸಚಿವ ಡಾ.ಸುಧಾಕರ್, ಸಚಿವ ಭೈರತಿ ಬಸವರಾಜ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಭಾಗವಹಿಸಿದ್ದರು.