ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈಗಾ ಮತ್ತೆ 5 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಮಧ್ಯಾಹ್ನದ ಹೆಲ್ತ್ ಬುಲೆಟಿನ್‍ನಲ್ಲಿ 36 ಮಂದಿ ಸೋಂಕಿತರು ಪತ್ತೆಯಾಗಿದ್ದು, ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ 5 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಇಂದು ಒಂದೇ ದಿನ 41 ಕೊರೊನಾ ಪ್ರಕರಣಗಳು ಪತ್ತೆಯಾಗಿರುವುದು ತಿಳಿದು ಬಂದಿದೆ.










