ರಾಜ್ಯದಲ್ಲಿ ಗಂಡಸರಿಗೂ ಫ್ರೀ ಬಸ್ ಪ್ರಯಾಣ ಭಾಗ್ಯ: ಸುಳಿವು ಕೊಟ್ಟ ಡಿ.ಕೆ.ಶಿವಕುಮಾರ್.

27

ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡಸರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಗಂಡಸರಿಗೂ ಫ್ರೀ ಬಸ್ ಪ್ರಯಾಣ ಸೌಲಭ್ಯ ಸಿಗುವ ಸಾಧ್ಯತೆ ಇದೆ. ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ನಡೆದ ಸಂವಾದದಲ್ಲಿ ಡಿಕೆಶಿ ಈ ಹೇಳಿಕೆ ನೀಡಿದ್ದರು. ಶಕ್ತಿ ಯೋಜನೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿಬಂದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಶಕ್ತಿ ಯೋಜನೆಯಡಿ ಒಂದು ವಯೋಮಾನದ ವರೆಗಿನ ಗಂಡುಮಕ್ಕಳಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಯೋಚಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದರು.