ರಾಜ್ಯದಲ್ಲಿ ಜೂನ್.14ರಿಂದ ಅನ್ ಲಾಕ್ ; ಏನಿರುತ್ತೆ?, ಏನಿರಲ್ಲ?

76
firstsuddi

ಬೆಂಗಳೂರು : ರಾಜ್ಯದಲ್ಲಿ ಜೂನ್ 14ರಿಂದ ಹಂತ ಹಂತವಾಗಿ ಅನ್ ಲಾಕ್ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಇದಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಇಂದು ಬಿಡುಗಡೆ ಮಾಡಿದ್ದು, ಸೋಂಕು ಇಳಿಮುಖವಾಗದ ರಾಜ್ಯದ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ಅದರಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಕೊಡಗು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಮಂಡ್ಯ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ನಿಯಮಗಳು ಜೂ. 21ರವರೆಗೆ ಮುಂದುವರೆಯಲಿದ್ದು, ಇದರಲ್ಲಿ ಯಾವುದೇ ಬದಲಾವಣೆಯೂ ಇರುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಇನ್ನೂ ಅನ್ ಲಾಕ್ ಇರುವ ಜಿಲ್ಲೆಗಳ ಪರಿಷ್ಕೃತ ಮಾರ್ಗಸೂಚಿಗಳು ಜೂನ್ 14ರ ಬೆಳಗ್ಗೆ 6 ಗಂಟೆಯಿಂದ ದಿನಾಂಕ ಜೂನ್ 21ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದ್ದು, ಯಾವುದು ಇರುತ್ತದೆ ಮತ್ತು ಯಾವುದಕ್ಕೆ ನಿರ್ಬಂಧ ಇರುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಏನಿರುತ್ತೆ?
• ಆಹಾರ, ಹಣ್ಣು ತರಕಾರಿ, ಮಾಂಸ, ಮೀನು, ಡೈರಿ ಪ್ರಾಡೆಕ್ಟ್, ದಿನಸಿ ಅಂಗಡಿಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ
• ಸ್ಟೀಲ್, ಸಿಮೆಂಟ್ ಅಂಗಡಿ ತೆರೆಯಲು ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ
• ಗಾರ್ಮೆಂಟ್ಸ್ ಗಳಲ್ಲಿ ಶೇ. 30ರಷ್ಟು ಸಿಬ್ಬಂದಿಗೆ ಅವಕಾಶ
• ಎಲ್ಲಾ ಕಾರ್ಖಾನೆಗಳು ಶೇ. 50ರಷ್ಟು ಸಿಬ್ಬಂದಿ ಕೆಲಸಕ್ಕೆ ಅವಕಾಶ
• ಆಟೋ, ಟ್ಯಾಕ್ಸಿಯಲ್ಲಿ ಇಬ್ಬರ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಸಂಚರಿಸಬಹುದು.
• ಬೀದಿಬದಿ ವ್ಯಾಪಾರಿಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ.
• ಅಗತ್ಯವಿದ್ದರೆ ಅಂತರ್ ಜಿಲ್ಲೆ ಸಂಚಾರಕ್ಕೆ ಅನುಮತಿ.
• ಮದ್ಯ ಪಾರ್ಸಲ್ ಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೆ ಅನುಮತಿ
• ಪಾರ್ಕ್ ಗಳನ್ನು ಬೆಳಗ್ಗೆ 5ರಿಂದ 10 ಗಂಟೆಯವರೆಗೆ ತೆರೆಯಲು ಅವಕಾಶ.

ಏನಿರಲ್ಲ?
• ಅಂತರ್ ರಾಜ್ಯ ಸಂಚಾರಕ್ಕೆ ನಿರ್ಬಂಧ.
• ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ
• ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೋವಿಡ್ ನೈಟ್ ಕರ್ಫ್ಯೂ ಜಾರಿ. ಈ ವೇಳೆ ಸಂಚಾರಕ್ಕೆ ನಿರ್ಬಂಧ.