ಶಿವಮೊಗ್ಗ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ರಾಜ್ಯದ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಶಿಕಾರಿಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ಇರುವ ಮಾಹಿತಿ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ. ಹಾಲಿ ಶಾಸಕರುಗಳಿಗೆ ಟಿಕೆಟ್ ನೀಡುವ ವಿಚಾರ ಕೇಂದ್ರದ ನಾಯಕರ ಜವಾಬ್ದಾರಿ. ಅದನ್ನು ಅವರೇ ನೋಡಿಕೊಳ್ಳುತ್ತಾರೆ ಎಂದರು.
ಅಮಿತ್ ಶಾ ಅವರು ಇಂದು ಸಂಜೆ ಬೆಂಗಳೂರಿಗೆ ಬರ್ತಿದ್ದಾರೆ. ನಾನೂ ಅವರನ್ನು ಭೇಟಿ ಮಾಡುತ್ತೇನೆ. ಚುನಾವಣೆ ವರ್ಷ ಆಗಿರುವುದರಿಂದ ಇನ್ನು ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಕ್ಕೆ ಹೆಚ್ಚು ಗಮನ ಕೊಡಲು ನಿರ್ಧರಿಸಿದ್ದಾರೆ. ರಾಜಕೀಯ ಪರಿಸ್ಥಿತಿ ಹಾಗೂ 150 ಸ್ಥಾನ ಪಡೆಯುವ ಬಗ್ಗೆ ಗುರಿ ಇದೆಯೋ ಅದರ ಬಗ್ಗೆ ಇಬ್ಬರು ಸಲಹೆ ಕೊಡುವವರಿದ್ದಾರೆ ಎಂದು ತಿಳಿಸಿದರು.










