ರಾಜ್ಯದಲ್ಲಿ ಪಿಎಫ್ಐ, ಎಸ್‍ಡಿಪಿಐ ಬೆಳೆಯಲು ಸಿದ್ದರಾಮಯ್ಯ ಕಾರಣ : ನಳಿನ್ ಕುಮಾರ್ ಕಟೀಲ್.

52
firstsuddi

ವಿಜಯಪುರ: ರಾಜ್ಯದಲ್ಲಿ ಪಿಎಫ್ಐ, ಎಸ್ ಡಿಪಿಐ ಬೆಳೆಯಲು ಸಿದ್ದರಾಮಯ್ಯ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ನಗರದ ಸಿದ್ದೇಶ್ವರ ಆಶ್ರಮಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರಿಂದಲೇ ಪರಿಸ್ಥಿತಿ ಗಂಭೀರವಾಗಿದೆ. ಸಿದ್ದರಾಮಯ್ಯ ಅವಧಿಯಲ್ಲಿ ದೇಶ ವಿರೋಧಿ ಸಂಘಟನೆ ಬೆಳೆದಿವೆ. ನಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಎನ್ ಐಎ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೆ ಬಂಧಿಸಿದ್ದಾರೆ ಎಂದರು.

ಪಿಎಫ್ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.