ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದರೆ, ಇತ್ತ ಬ್ಲ್ಯಾಕ್ ಫಂಗಸ್ ಹಾವಳಿ ಜೊರಾಗಿದೆ. ಪ್ರಸ್ತುತ ರಾಜ್ಯಾದ್ಯಂತ ಒಟ್ಟು 3,228 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದ್ದು, ಇದುವರೆಗೆ 261 ಜನ ಬಲಿಯಾಗಿದ್ದಾರೆ. ದಿನೇ ದಿನೇ ಬ್ಲ್ಯಾಕ್ ಫಂಗಸ್ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಆತಂಕಕ್ಕೆ ಕಾರಣವಾಗಿದೆ.
ಇನ್ನೂ ಸಿಲಿಕಾನ್ ಸಿಟಿಯಲ್ಲಿ ಅತಿ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದ್ದು, 1,039 ಜನರಿಗೆ ಸೋಂಕು ಇರುವುದು ವರದಿಯಾಗಿದೆ. ಜೊತೆಗೆ ಬ್ಲ್ಯಾಕ್ ಫಂಗಸ್ ಗೆ 81 ಜನ ಸಾವನ್ನಪ್ಪಿದ್ದಾರೆ. 825 ಜನ ಚಿಕಿತ್ಸೆ ಪಡೆಯುತ್ತಿದ್ದು, 49 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.










