ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಸೂಕ್ತ ಕಾನೂನು ತರುತ್ತೇವೆ : ಆರಗ ಜ್ಞಾನೇಂದ್ರ.

65
firstsuddi

ಹಾಸನ : ಅಂತಾರಾಷ್ಟ್ರೀಯ ಕಾಫಿ ದಿನದ ಅಂಗವಾಗಿ ಜಿಲ್ಲೆಯ ಹಳೇಬೀಡಿನ ಪುಷ್ಪಗಿರಿ ಮಠದ ಆವರಣದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶ ಉದ್ಘಾಟಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮತಾಂತರದಿಂದ ರಾಜ್ಯಾದ್ಯಂತ ಕೋಮು ಗಲಭೆ ನಡೆಯುತ್ತಿದೆ. ಮತಾಂತರಕ್ಕೆ ಶಾಸಕರ ಕುಟುಂಬ ಒಳಗಾಗಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.

ಮತಾಂತರ ಮಾಡಿ ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಅಧರ್ಮ. ಮತಾಂತರ ನಿಷೇಧಿಸಲು ಕಾನೂನು ರಚಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮತಾಂತರ ನಿಷೇಧಕ್ಕೆ ಸೂಕ್ತ ಕಾನೂನು ತರುತ್ತೇವೆ ಎಂದರು.

ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ತಾಲಿಬಾನ್ ಮತ್ತು ಆರ್​ಎಸ್​ಎಸ್​ಗೆ ವ್ಯತ್ಯಾಸ ತಿಳಿದಿಲ್ಲ ಅನಿಸುತ್ತದೆ. ರಾಜಕೀಯ ಕಾರಣಕ್ಕಾಗಿ ಆರ್ಎಸ್ಎಸ್ ಅನ್ನು ಮಧ್ಯಕ್ಕೆ ಎಳೆಯುತ್ತಿದ್ದಾರೆ ಎಂದರು.