ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದರಲ್ಲಿ ಯಾವಾ ಸಂಶಯವೂ ಇಲ್ಲ : ಹೆಚ್.ಡಿ. ದೇವೇಗೌಡ…

236
firstsuddi

ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ರಾಜ್ಯ ಮೈತ್ರಿ ಸರ್ಕಾರ ಎಷ್ಟು ದಿನ ಇರುತ್ತದೋ ಗೊತ್ತಿಲ್ಲ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದರಲ್ಲಿ ಯಾವಾ ಸಂಶಯವೂ ಇಲ್ಲ. ಸರ್ಕಾರ ಉಳಿಸಿಕೊಳ್ಳುವುದು ಕಾಂಗ್ರೆಸ್ ನಾಯಕರ ಕೈಯಲ್ಲಿದೆ. ನನ್ನ ಜೊತೆಯಲ್ಲಿ ಬೆಳೆದವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಆದರೆ ನಾನು ಯಾವುದಕ್ಕೂ ಧೃತಿಗೆಡದೆ ಮುಂದೆ ಬಂದಿದ್ದೇನೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಸಲುವಾಗಿ ಸರಿಯಾಗಿ ಯೋಚಿಸದೆ ನಿಮ್ಮ ಮಗನನ್ನು ಸಿಎಂ ಮಾಡಿ ಎಂದು ಕೇಳಿಕೊಂಡರು. ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಹೈಕಮಾಂಡ್ ಶಕ್ತಿ ಕಳೆದುಕೊಂಡಿದ್ದು, ಜೆಡಿಎಸ್ ಪಕ್ಷದ ಜೊತೆ ಮುಂದುವರಿದರೆ ಕಾಂಗ್ರೆಸ್ ಪಕ್ಷ ಹೋಗುತ್ತೆ ಎಂಬ ಸಂಕಟ ಇದೆ. ಇದರಿಂದಾಗಿ ನಮ್ಮ ಒಂದು ಮಂತ್ರಿ ಸ್ಥಾನವನ್ನೂ ಅವರು ತೆಗೆದುಕೊಂಡರು. ನಾನು ಹೀಗೆ ಎಲ್ಲಾ ನೋವನ್ನು ಸಹಿಸಿಕೊಂಡು ಬಂದಿದ್ದೇನೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದರು.