ಬೆಂಗಳುರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 69 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆಯಾಗಿದೆ. ಇಂದು ಬೆಳಿಗ್ಗೆ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ 45 ಕೊರೊನಾ ಪ್ರಕರಣಗಳು ಪತ್ತೆಯಾಗಿತ್ತು. ಈಗಾ ಮತ್ತೆ 24 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಾಗಿದೆ.










