ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ…

53
firstsuddi

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆಯಿದ್ದು, ಇಂದಿನಿಂದ 5 ದಿನ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಮಾ.14 ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗಲಿದ್ದು, ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ ಆಗುವ ಸಂಭವವಿದೆ. 

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಮತ್ತು ತುಮಕೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.