ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 10 ಹೊಸ ಕೊರೊನಾ ಪ್ರಕರಣಗಳು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 191ಕ್ಕೆ ಏರಿಕೆಯಾಗಿದೆ. ಬೆಳಗಾವಿ-1, ಮೈಸೂರು-2, ಮಂಡ್ಯ-1 ಬಾಗಲಕೋಟೆ-3, ಬೆಂಗಳೂರು-2 ಹಾಗೂ ಚಿಕ್ಕಬಳ್ಳಾಪುರದಲ್ಲಿ 1 ಹೊಸ ಕೊರೊನಾ ಪ್ರಕರಣ ದೃಢವಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ.











