ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 378 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,213ಕ್ಕೆ ಏರಿಕೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ಸೋಂಕಿಗೆ ಇಬ್ಬರು ಮಹಿಳೆಯರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 59ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ನಲ್ಲಿ ಇಂದು ಉಡುಪಿ-121, ಯಾದಗಿರಿ-103, ಕಲಬುರಗಿ-69, ದಕ್ಷಿಣ ಕನ್ನಡ-24, ಬೆಂಗಳೂರು ನಗರ-18, ದಾವಣೆಗೆರೆ-6, ಚಿಕ್ಕಬಳ್ಳಾಪುರ-2, ಉತ್ತರ ಕನ್ನಡ-2, ಕೋಲಾರ-1, ಹಾವೇರಿ-3, ಕೊಪ್ಪಳ-1 ರಾಯಚೂರು-2, ಮಂಡ್ಯ-3, ವಿಜಯಪುರ-6, ಗದಗ-4, ಬೆಳಗಾವಿ-5, ಹಾಸನ-3, ತುಮಕೂರು-1, ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ.










