ರಾಜ್ಯದಲ್ಲಿ 705ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ…

137
firstsuddi

ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 12 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈಗಾ ಮತ್ತೆ 4ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಬೆಳಗ್ಗಿನ ಹೆಲ್ತ್ ಬುಲೆಟಿನ್‍ನಲ್ಲಿ 8 ಮಂದಿಗೆ ಸೋಂಕು ತಗುಲಿರುವುದು ದೃಡವಾಗಿದ್ದು, ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ 4 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.