ರಾಜ್ಯದಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ – ಬಿ.ಎಸ್. ಯಡಿಯೂರಪ್ಪ.

171
firstsuddi

ಬೆಂಗಳೂರು : ಹೊಸ ಬಗೆಯ ಕೊರೋನಾ ವೈರಸ್ ಹರಡುತ್ತಿರುವ ಕಾರಣದಿಂದ ರಾಜ್ಯದಲ್ಲಿ ಇಂದಿನಿಂದ ಜನವರಿ 2 ರ ವರೆಗೆ ರಾತ್ರಿ ಕರ್ಫ್ಯೂ ಜಾರಿಗೆಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಕಟಿಸಿದ್ದಾರೆ. ಇಂದು ಕೋವಿಡ್ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇಂದು ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದ್ದು ಇಡೀ ರಾಜ್ಯಕ್ಕೆ ಈ ಆದೇಶ ಅನ್ವಯವಾಗಲಿದೆ ಎಂದರು.