ರಾಜ್ಯದ ಜನತೆಗೆ ವಿದ್ಯುತ್ ಶಾಕ್ – ಪ್ರತಿ ಯೂನಿಟ್‍ಗೆ 35 ಪೈಸೆ ಏರಿಕೆ…

101
firstsuddi

ಬೆಂಗಳೂರು : ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಈಗಾಗಲೇ ಗಗನಕ್ಕೇರಿದೆ. ಇದರ ಮಧ್ಯೆ ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಮತ್ತೊಂದು ಶಾಕ್ ಕೊಟ್ಟಿದೆ. ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದ್ದು, ಏಪ್ರಿಲ್ 1 ರಿಂದಲೇ ಈ ಪರಿಷ್ಕೃತ ವಿದ್ಯುತ್ ದರ ಜಾರಿಗೆ ಬರಲಿದೆ.

ವಸಂತನನಗರದ ಕೆಇಆರ್ ಸಿ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಕೆಇಆರ್ ಸಿ ಅಧ್ಯಕ್ಷ ಮಂಜುನಾಥ್, ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಸೇರಿದಂತೆ ಹೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ಆದಾಯ ಕೊರತೆ ಸರಿದೂಗಿಸಲು ದರ ಏರಿಕೆ ಮಾಡಲಾಗಿದ್ದು, ಇಂಧನ ಶುಲ್ಕ ಕೇವಲ 5 ಪೈಸೆ ಹೆಚ್ಚಳ ಮಾಡಿದ್ದೇವೆ. ಈ ಬಾರಿ ಶೇಕಡಾ 4.33ರಷ್ಟು ದರ ಹೆಚ್ಚಳ ಮಾಡಲಾಗಿದೆ. ಇಂಧನ ವೆಚ್ಚ ಸೇರಿ ಒಟ್ಟು 35 ಪೈಸೆ ಏರಿಕೆ ಮಾಡಲಾಗಿದೆ ಎಂದರು.