ಬೆಂಗಳೂರು : ಇಂದಿನಿಂದ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಲಿದೆ. ಇಂದಿನಿಂದ ಅನ್ವಯವಾಗುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(KERC) ಇಂಧನ ಹೊಂದಾಣಿಕೆ ಶುಲ್ಕವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ವರ್ಷದಲ್ಲಿ ಮೂರು ಬಾರಿ ವಿದ್ಯುತ್ ದರ ಹೆಚ್ಚಳವಾಗಿದೆ.
ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 24 ಪೈಸೆ ಹೆಚ್ಚುವರಿ ಶುಲ್ಕ ಪಾವತಿ ಮಾಡಬೇಕು. ಸೆಸ್ಕಾಂ ಅಡಿಯಲ್ಲಿ ಬರುವ ವಿದ್ಯುತ್ ಗ್ರಾಹಕರಿಗೆ ಹೆಚ್ಚುವರಿ 35 ಪೈಸೆ ಏರಿಕೆ ಮಾಡಲಾಗಿದೆ. ಹೆಸ್ಕಾಂ ಹಾಗೂ ಜೆಸ್ಕಾಂ ಅಡಿಯ ವಿದ್ಯುತ್ ಗ್ರಾಹಕರು ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚುವರಿ ವಿದ್ಯುತ್ ಶುಲ್ಕ ಕಟ್ಟಬೇಕು.
ಅದರಂತೆ ಪ್ರತಿ ನೂರು ಯುನಿಟ್ ವಿದ್ಯುತ್ ಬಳಸುವ ಗ್ರಾಹಕರು ತಮ್ಮ ತಿಂಗಳ ವಿದ್ಯುತ್ ಬಿಲ್ ನಲ್ಲಿ ಹೆಚ್ಚುವರಿಯಾಗಿ 43 ರೂ. ನಿಂದ 24 ರೂ. ವರೆಗೆ ಪಾವತಿಸಬೇಕಾಗಿದೆ. ವಿದ್ಯುತ್ ಸರಬರಾಜು ಕಂಪನಿಗಳ ನಷ್ಟ ಸರಿದೂಗಿಸಲು ದರ ಏರಿಕೆ ಮಾಡಲಾಗಿದೆ.
ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆಯಾಗಿದೆ. ಪ್ರತಿ 3 ತಿಂಗಳಿಗೊಮ್ಮೆ ಇಂಧನ ಹೊಂದಾಣಿಕೆ ಶುಲ್ಕ ಪರಿಷ್ಕರಣೆ ಮಾಡಬೇಕು. ಆದರೆ ಗ್ರಾಹಕರಿಗೆ ಹೊರೆ ಬೀಳಬಾರದು ಎಂಬ ಕಾರಣಕ್ಕೆ 6 ತಿಂಗಳಿಗೊಮ್ಮೆ ಶುಲ್ಕ ಹೆಚ್ಚಳ ಮಾಡಲಾಗುತ್ತಿದೆ.










