ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ…

46
firstsuddi

ಬೆಂಗಳೂರು : ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರು ನೇಮಕವಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿಯಾಗಿರುವ ಪಿ.ರವಿಕುಮಾರ್ ಅವರು ಮೇ 31ರಂದು ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತೆ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಈ ಹುದ್ದೆಗೇರಿದ ನಾಲ್ಕನೇ ಮಹಿಳೆ ಇವರಾಗಿದ್ದಾರೆ. ಈ ಹಿಂದೆ 200ರಲ್ಲಿ ತೆರೇಸಾ ಭಟ್ಟಾಚಾರ್ಯ 2006ರಲ್ಲಿ ಮಾಲತಿ ದಾಸ್ ಮತ್ತು 2017ರಲ್ಲಿ ರತ್ನಪ್ರಭಾ ಅವರು ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಮೂಲತಃ ಪಂಜಾಬ್ ಮೂಲದವರಾಗಿರುವ ವಂದಿತಾ ಶರ್ಮಾ ಅವರು, 1986 ಬ್ಯಾಚ್ ನ ಅಧಿಕಾರಿಯಾಗಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಲಸಿಕೆ ವಿತರಣೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಯಾಗಿದ್ದರು. ಕೇಂದ್ರ ಸರ್ಕಾರದ ಬಾಹ್ಯಾಕಾಶ ಇಲಾಖೆಯಲ್ಲಿಯೂ ವಂದಿತಾ ಶರ್ಮಾ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಐಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷೆಯಾಗಿದ್ದಾರೆ.