ರಾಜ್ಯಸಭೆ ಫಲಿತಾಂಶ : ಬಿಜೆಪಿಗೆ ಮೂರು, ಕಾಂಗ್ರೆಸ್‍ಗೆ ಒಂದು ಸ್ಥಾನ…

68
firstsuddi

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿಗೆ ಮೂರು ಸ್ಥಾನಗಳು ಸಿಕ್ಕಿದ್ದರೆ, ಕಾಂಗ್ರೆಸ್ ಪಕ್ಷ 4 ನೇ ಸ್ಥಾನವನ್ನು ಪಡೆದಿದೆ. ಜೆಡಿಎಸ್ ಶೂನ್ಯ ಸಂಪಾದನೆ ಮಾಡಿ ಹಿನ್ನಡೆ ಅನುಭವಿಸಿದೆ.

ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೆ, ಕಾಂಗ್ರೆಸ್ ನಿಂದ ಜೈ ರಾಮ್ ರಮೇಶ್ ಆಯ್ಕೆಯಾಗಿದ್ದಾರೆ. ಜೆಡಿಎಸ್ ಪಕ್ಷ ಕಣಕ್ಕೆ ಇಳಿಸಿದ್ದ ಕುಪೇಂದ್ರ ರೆಡ್ಡಿ ಹಾಗೂ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮನ್ಸೂರ್ ಅಲಿ ಖಾನ್ ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದಾರೆ.