ಬೆಂಗಳೂರು : ರಾಜ್ಯ ವಿಧಾನಸಭೆಗೆ ಜೂನ್.19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರು ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಗಳೂ ಆಗಿರುವ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಹೆಚ್.ಡಿ ರೇವಣ್ಣ ಸೇರಿದಂತೆ ಹಲವು ಇದ್ದರು.










