ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ವೀರೇಂದ್ರ ಹೆಗ್ಗಡೆ.

55
firstsuddi

ನವದೆಹಲಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.  ಕನ್ನಡದಲ್ಲಿ ದೇವರ ಹೆಸರಿನಲ್ಲಿ ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಈ ಬಾರಿಯ ರಾಜ್ಯಸಭೆಗೆ ಡಾ. ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಖ್ಯಾತ ಅಥ್ಲೀಟ್ ಪಿ.ಟಿ. ಉಷಾ, ಸಿನಿಮಾ ಕತೆಗಾರ ವಿ. ವಿಜಯೇಂದ್ರ ಪ್ರಸಾದದರನ್ನ ನಾಮ ನಿರ್ದೇಶನ ಮಾಡಲಾಗಿತ್ತು.