ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ…

40
firstsuddi

ನವದೆಹಲಿ: ಮಹಿಳಾ ದಿನಾಚರಣೆಯಂದೇ ಕೇಂದ್ರ ಸರ್ಕಾರ, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ಸಮಾಜ ಸೇವೆ ಮತ್ತು ಶಿಕ್ಷಣಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮನಿರ್ದೇಶನ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದರು.

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ.