ಅಹಮದಾಬಾದ್ : ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಗುಜರಾತ್‍ನ ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಶಾಸಕರಾದ ಅಕ್ಷಯ್ ಪಟೇಲ್ ಹಾಗೂ ಜಿತು ಚೌಧರಿ ಅವರು ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಗುಜರಾತ್‍ನಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳು ಖಾಲಿಯಿದ್ದು, ಜೂನ್ 19ರಂದು ಚುನಾವಣೆ ನಡೆಯಲಿದೆ. ಪಟೇಲ್ ವಡೋದರಾದ ಕರ್ಜನ್ ಸ್ಥಾನವನ್ನು ಪ್ರತಿನಿಧಿಸಿದರೆ, ಚೌಧರಿ ವಲ್ಸಾದ್‌ನ ಕಪ್ರದ ಸ್ಥಾನದಿಂದ ಗೆದ್ದಿದ್ದರು.










