ರಾಜ್ಯಸಭೆ ಚುನಾವಣೆ : ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್‍ಗೆ ಟಿಕೆಟ್ ನೀಡಿದ ಬಿಜೆಪಿ.

45
firstsuddi

ನವದೆಹಲಿ : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರಿಗೆ ಭಾರತೀಯ ಜನತಾ ಪಾರ್ಟಿ ಟಿಕೆಟ್ ನೀಡಿದೆ.

ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಲೆಹರ್ ಸಿಂಗ್ ಅವರಿಗೆ ಬಿಜೆಪಿ ವರಿಷ್ಠರು ಮಣೆ ಹಾಕಿದ್ದಾರೆ. ಹಾಲಿ ಸದಸ್ಯ ಕೆ.ಸಿ.ರಾಮಮೂರ್ತಿ, ಲೆಹರ್ ಸಿಂಗ್ ಮತ್ತು ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರನ್ನು ಮೂರನೇ ಸ್ಥಾನಕ್ಕಾಗಿ ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿತ್ತು.

ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ.