ಬೆಂಗಳೂರು : ಇಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು 14 ದಿನದ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಕೋವಿಡ್- ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಬೆಂಗಳೂರಿನಲ್ಲಿ ಲಾಕ್ ಡೌನ್ ಆಗದಿದ್ರೆ ಸ್ಥಿತಿ ಕೈ ಮೀರಬಹದು. ಸಚಿವ ಸಂಪುಟದ ಸಹೋದ್ಯೋಗಿಗಳು, ತಜ್ಞರೊಂದಿಗೆ ಸಮಾಲೋಚಿಸಿ ಕೆಲವು ನಿರ್ಧಾರಕ್ಕೆ ಬರಲಾಗಿದೆ. 14 ದಿನದ ಬಳಿಕ ಮತ್ತೆ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.
18ರಿಂದ 45 ವರ್ಷದೊಳಗಿನವರಿಗೆ ಸರ್ಕಾರದಿಂದ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ. ಬೆಳಗ್ಗೆ 6 ರಿಂದ 10 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, ಗಾರ್ಮೆಂಟ್ಸ್ ನೌಕರರನ್ನು ಹೊರತುಪಡಿಸಿ, ಕೃಷಿ, ಮೆಡಿಕಲ್, ಕಟ್ಟಡ ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯರೆಗೂ ಕರ್ಫ್ಯೂ ಮುಂದುವರೆಯಲಿದೆ. ಈ ಸಂದರ್ಭದಲ್ಲಿ ಸಾರಿಗೆ ಸಂಚಾರ ಇರುವುದಿಲ್ಲ ಎಂದು ಯಡಿಯೂರಪ್ಪ ಅವರು ತಿಳಿಸಿದರು.










