ರಾಜ್ಯಾದ್ಯಂತ ಹುಕ್ಕಾಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ…

45
firstsuddi

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ತಂಬಾಕು ರಹಿತ ಹುಕ್ಕಾ ಬಳಕೆ ಮತ್ತು ಮಾರಾಟ, ಸೇವನೆಯನ್ನು ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು ಸಂಬಂಧಿತ ರೋಗಗಳ ಹೆಚ್ಚಳವನ್ನು ತಡೆಯುವ ನಿಟ್ಟಿನಲ್ಲಿ ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾದಭರಿತ, ಸ್ವಾದರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನ್ನಿತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸುತ್ತಿರುವುದಾಗಿ ಆರೋಗ್ಯ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.

ಹುಕ್ಕಾಬಾರ್ ಗಳ ಪರಿಣಾಮವನ್ನು ಅಧ್ಯಯನ ಮಾಡಿದ ಆರೋಗ್ಯ ತಜ್ಞರು ನಿಷೇಧಕ್ಕೆ ಶಿಫಾರಸು ಮಾಡಿದ್ದರು. ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ ಹುಕ್ಕಾ ಉತ್ಪನ್ನ ಹಾಗೂ ಮಾರಾಟ ನಿಷೇಧಿಸಲಾಗಿದೆ.