ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಜಾರಿ – ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆ…

59
firstsuddi

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಘೋಷಣೆ ಹೊರಡಿಸಲು ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನಲೆಯಲ್ಲಿ ಇಂದು ಎಲ್ಲಾ ಸಚಿವರುಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ಸಂಗ್ರಹಿಸುತ್ತಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಇನ್ನೂ ಗೊಂದಲದಲ್ಲೇ ಇದೆ ಎನ್ನಲಾಗಿದೆ. ಹಾಗಾಗಿ ಕ್ಯಾಬಿನೆಟ್ ಸಭೆಯನ್ನೂ ಶುಕ್ರವಾರಕ್ಕೆ ಮುಂದೂಡಲಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.

ಗ್ಯಾರಂಟಿ ಯೋಜನೆ ಜಾರಿಗೆ, ಹಣಕಾಸು ಕ್ರೋಢೀಕರಣ ಹಾಗೂ ಪೂರಕ ದಾಖಲಾತಿ ಎಲ್ಲವೂ ಒಳಗೊಂಡು ಕಾಲಾವಕಾಶದ ಅಗತ್ಯ ಇದೆ. ಈ ನಿಟ್ಟಿನಲ್ಲಿ ತರಾತುರಿಯಲ್ಲಿ ಜಾರಿ ಮಾಡುವ ಯೋಚನೆ ಸರ್ಕಾರದ ಮುಂದೆ ಇಲ್ಲ ಎಂಬುದು ತಿಳಿದುಬಂದಿದೆ.

ಈ ಹಿನ್ನಲೆಯಲ್ಲಿ ಸಚಿವರ ಜೊತೆಗೆ ಚರ್ಚೆ ನಡೆಸಿದ ಬಳಿಕ ಮತ್ತೊಂದು ಸುತ್ತು ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.