ರಾಜ್ಯ ಬಜೆಟ್- ಮಹಾದಾಯಿ ಯೋಜನೆಗೆ 500 ಕೋಟಿ ಅನುದಾನ.

196
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ನೀರಾವರಿ ಕುರಿತ ಮುಖ್ಯಾಂಶಗಳು ಈ ಕೆಳಕಂಡಂತಿದೆ.

• ಮಹಾದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 500 ಕೋಟಿ ರೂ. ಅನುದಾನ.
• ಅಂತರ್ಜಲ ಸ್ಥಿತಿ ಗಂಭೀರವಾಗಿರುವ 76 ತಾಲ್ಲೂಕುಗಳಲ್ಲಿ ಮುಂದಿನ ಮೂರು ವರ್ಷದಲ್ಲಿ ನಾಲ್ಕು ಲಕ್ಷ ಹೆಕ್ಟೇರ್ನಲ್ಲಿ 810 ಅತಿ ಸಣ್ಣ ಜಲಾನಯನಗಳಲ್ಲಿ ಜಲಾವೃತ ಯೋಜನೆ ಅನುಷ್ಠಾನ.
• ತೋಟಗಾರಿಕೆ ಉತ್ಪನ್ನಗಳ ಸಮರ್ಪಕ ಕೊಯ್ಲೋತ್ತರ ನಿರ್ವಹಣೆಗೆ ವಿವಿಧ ಜಿಲ್ಲೆಗಳ 10 ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ 5000 ಮೆಟ್ರಿಕ್ ಟನ್ ಸಾಮಥ್ರ್ಯದ ಶೀತಲ ಗೃಹಗಳ ನಿರ್ಮಾಣ.
• ಹೊಸದಾಗಿ ತೋಟಗಾರಿಕೆ ಕೃಷಿ ಪದ್ಧತಿಗೆ ವರ್ಗಾವಣೆಗೊಳ್ಳುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಪ್ರತಿ ಹೆಕ್ಟೇರ್ 5000 ರೂ.ಗಳಂತೆ ಗರಿಷ್ಠ 10,000 ರೂ. ನೆರವು.
• ಸೂಕ್ಷ್ಮ ನೀರಾವರಿಗೆ 627 ಕೋಟಿ ರೂ. ಅನುದಾನ.
• ಎತ್ತಿನ ಹೊಳೆ ಯೋಜನೆಗೆ 1500 ಕೋಟಿ ಅನುದಾನ.
• ಹೂಳು ತುಂಬಿರುವ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣಾ ಸಾಮಥ್ರ್ಯದ ಕೊರತೆಯನ್ನು ನೀಗಿಸಲು ಪರ್ಯಾಯ ಹರಿವು ನಾಲೆ ಮೂಲಕ ನವಲೆ ಹತ್ತಿರ ಸಮತೋಲನ ಜಲಾಶಯ ನಿರ್ಮಾಣದ ವಿಸ್ತøತ ಯೋಜನಾ ವರದಿ ತಯಾರಿಕೆಗೆ 20 ಕೋಟಿ ರೂ. ಅನುದಾನ.
• ರಾಜ್ಯದಲ್ಲಿ 5000 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಏತ ನೀರಾವರಿ ಯೋಜನೆಗಳ ಅನುಷ್ಠಾನ.
• ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗೆ ಕುಡಿಯ ನೀರು ಪೂರೈಕೆಗೆ ತಿಂತಿಣಿ ಬ್ರಿಡ್ಜ್ ಬಳಿ ಕೃಷ್ಣಾ ನದಿಗೆ ಜಲಾಶಯ ನಿರ್ಮಾಣ-ವಿಸ್ತøತ ಯೋಜನಾ ವರದಿ ತಯಾರಿಕೆಗೆ ಕ್ರಮ.

  • ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (DCC), ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (PCARD) ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (PACS) ಗಳಿಂದ ನೀಡಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ. 466 ಕೋಟಿ ರೂ. ನೆರವು. 92 ಸಾವಿರ ರೈತರಿಗೆ ಪ್ರಯೋಜನ.
  • ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ
  • ಕೃಷಿ ಮೌಲ್ಯ ಸರಪಳಿಯ ಅಭಿವೃದ್ಧಿಗಾಗಿ 100 ಎಫ್‍ಪಿಒ ರಚನೆ, ಈ ಎಫ್‍ಪಿಒ ಗಳ ಮೂಲಕ ಮೌಲ್ಯ ಸರಪಳಿ ಅಭಿವೃದ್ಧಿಗೆ ಎಂಟು ಕೋಟಿ ರೂ. ನೆರವು.