ರಾಜ್ಯ ಮಟ್ಟದ ಕನ್ನಡ ಭಾಷಣ ಸ್ಪರ್ಧೆ : ಅಂಗಡಿ ಸರ್ಕಾರಿ ಪ್ರೌಢ ಶಾಲೆಗೆ ದ್ವಿತೀಯ ಬಹುಮಾನ.

1304

ಮೂಡಿಗೆರೆ : ಇತ್ತೀಚೆಗೆ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳಲ್ಲಿ ಅಂಗಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ ದೊರೆತಿದೆ.

ಉಗ್ಗೇಹಳ್ಳಿ ಕೃಷ್ಣಾಚಾರ್ ಹಾಗೂ ರೇಣುಕಾ ದಂಪತಿಯ ಪುತ್ರಿ ಯು.ಕೆ.ಸುಶ್ಮಿತಾ ಎಂಬ ವಿದ್ಯಾರ್ಥಿನಿಯು ಕನ್ನಡ ಭಾಷೆ ಭಾಷಣ ಸ್ಪರ್ಧೆಯಲ್ಲಿ 34 ಶೈಕ್ಷಣಿಕ ಜಿಲ್ಲೆಗಳ ವಿದ್ಯಾರ್ಥಿಗಳೊಂದಿಗೆ ತೀವ್ರವಾದ ಪೈಪೋಟಿ ಒಡ್ಡಿ ದ್ವಿತೀಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾಳೆ. ಮತ್ತೋರ್ವ ವಿದ್ಯಾರ್ಥಿನಿ ಅಂಗಡಿ ಗ್ರಾಮದ ಗಿರೀಶ್ ಹಾಗೂ ರೇಣುಕಾ ದಂಪತಿಯ ಪುತ್ರಿ ಎ.ಜಿ.ಆತ್ಮಿಯಾ ಅವರು ಎರಡನೇ ಬಾರಿಗೆ ಇಂಗ್ಲೀಷ್ ಭಾಷಣದಲ್ಲಿ ರಾಜ್ಯಮಟ್ಟದ ಸ್ಪರ್ಧೆಗೆ ಪ್ರವೇಶ ಪಡೆದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯಾಗಿದ್ದಾಳೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಗ್ರಾಮಸ್ಥರು ಮತ್ತು ಸ್ಥಳೀಯರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಶಾಲೆಯ ಶಿಕ್ಷಕ ವರ್ಗ ಹಾಗೂ ಎಸ್.ಡಿ.ಎಂ.ಸಿ ಸದಸ್ಯರುಗಳು ಅಭಿನಂದನೆ ಸಲ್ಲಿಸಿದ್ದಾರೆ.