ಯೂತ್ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ಎಫ್ ಐಆರ್ ದಾಖಲು…

86
firstsuddi

ಬೆಂಗಳೂರು : ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ.

ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ರಕ್ಷಾರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಆದರೆ ಈ ಪ್ರತಿಭಟನೆಗೆ ಯಾವುದೇ ಅನುಮತಿ ಪಡೆದಿರಲಿಲ್ಲ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೇ, ಸರ್ಕಾರದ ಕೊರೋನಾ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಹಿನ್ನಲೆ ಎಫ್.ಐ.ಆರ್ ದಾಖಲಾಗಿದೆ.