ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಶುಭಸುದ್ದಿ ನೀಡಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರ ಮೂಲವೇತನದಲ್ಲಿ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದ್ದು, ಜುಲೈ 1 ರಿಂದಲೇ ಜಾರಿಗೆ ಬರುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸದ್ಯ ಶೇ. 21.50 ರಿಂದ ಶೇ. 24.50 ಕ್ಕೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಅಲ್ಲದೇ ನಿವೃತ್ತ ಸರ್ಕಾರಿ ನೌಕರರಿಗೂ ಶೇ.3ರಷ್ಟು ಡಿಎ ಹೆಚ್ಚಳ ಆದೇಶ ಅನ್ವಯವಾಗಲಿದೆ. ಕಳೆದ ಮೂರು ತಿಂಗಳ ಹಿಂದೆ ಜುಲೈನಲ್ಲಿ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಶೇ 11.15ರಿಂದ 21.50ಕ್ಕೆ ತುಟ್ಟಿ ಭತ್ಯೆ ಹೆಚ್ಚಿಸಿತ್ತು.










