ರಾಜ್ಯ ಸರ್ಕಾರ ವಕ್ಫ್ ಕಾನೂನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

32

ಶಿಗ್ಗಾಂವಿ: ರಾಜ್ಯ ಸರ್ಕಾರ ವಕ್ಫ್ ಕಾನೂನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನಿನ್ನೆ ಮಾಧ್ಯಮನಿತ್ರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಕಂದಾಯ ಕಾನೂನುಗಳನ್ನು ನಿರ್ಲಕ್ಷಿಸಲಾಗುತ್ತಿದ್ದು, ಇದರಿಂದ ರಾಜ್ಯಾದ್ಯಂತ ಕೃಷಿ ಭೂಮಿಯನ್ನು ವಕ್ಫ್ ಆಸ್ತಿ ಎಂದು ತಪ್ಪಾಗಿ ಪರಿಗಣಿಸಲಾಗುತ್ತಿದೆ. ಜಮೀನು ವಿಚಾರದಲ್ಲಿ ಕಂದಾಯ ದಾಖಲೆಗಳನ್ನು ನಿರ್ಣಾಯಕ ಎಂದು ಪರಿಗಣಿಸಬೇಕು. ಆದರೆ, ಆ ಕಾನೂನು ಕಡೆಗಣಿಸಿ ಅದಾಲತ್ ಪ್ರಕಾರ ಆಗಿದ್ದೇ ಅಂತಿಮ ಎಂದು ಮಾಡುತ್ತಿದ್ದಾರೆಂದು ಕಿಡಿಕಾರಿದರು ಭೂದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ರೈತರಿಗೆ ನ್ಯಾಯ ದೊರಕಿಸಿಕೊಡುವಂತೆ ಎಂದು ಅವರು ಆಗ್ರಹಿಸಿದರು. ಹಿಂದೆ ಇಂತಹ ಪ್ರಕರಣ ಆದಾಗ ಅದನ್ನು ಕಂಡಿಸಿ ನ್ಯಾಯಾಲಯಕ್ಕೆ ಹೋದೊರಿಗೆಲ್ಲ ನ್ಯಾಯ ಸಿಕ್ಕಿದೆ. ಯಾರೋ ಒಬ್ಬರು ಅರ್ಜಿ ಹಾಕಿದರೆ ಇಡೀ ರಾಜ್ಯದ ರೈತರ ಆಸ್ತಿಗೆ ವಕ್ಪ್ ಆಸ್ತಿಯೆಂದು ರೈತರಿಗೆ ನೊಟೀಸ್ ನೀಡುವ ಮೂಲಕ ಸರ್ಕಾರದಿಂದ ಅರಾಜಕತೆ, ಗಾಬರಿ ಉಂಟು ಮಾಡುವ ಕೆಲಸ ನಡೆದಿದೆ. ಇದೊಂದು ಬೇಜವಾಬ್ದಾರಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.