ರಾತ್ರಿ ವೇಳೆ ಜಾಗರೂಕತೆಯಿಂದ ವಾಹನ ಚಲಾಯಿಸಿ : ಸಿಎಂ ಬೊಮ್ಮಾಯಿ ಸಲಹೆ…

59
firstsuddi

ಬೆಂಗಳೂರು : ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ರಾತ್ರಿ ನಡೆದ ಅಪಘಾತ ಪ್ರಕರಣ ಬಹಳ ಆಘಾತಕಾರವಾದದ್ದು, 7 ಜನ ಸಾವನ್ನಪ್ಪಿದ್ದಾರೆ. ಪೊಲೀಸರು ಈಗಾಗಲೇ ತನಿಖೆ ಮಾಡುತ್ತಿದ್ದಾರೆ. ಯಾವ ಕಾರಣಕ್ಕೆ ಅಪಘಾತ ನಡೆಯಿತು ಅನ್ನೋದು ತನಿಖೆಯಲ್ಲಿ ಗೊತ್ತಾಗುತ್ತದೆ. ರಾತ್ರಿ ವೇಳೆ ಜಾಗರೂಕತೆಯಿಂದ ವಾಹನ ಚಲಾಯಿಸಬೇಕು. ಯಾರೇ ಆದರೂ ಸುರಕ್ಷತಾ ಕ್ರಮಗಳೊಂದಿಗೆ ವಾಹನ ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಇನ್ನು ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ ಅವಕಾಶ ವಿಚಾರ ಸಂಬಂಧ ಮಾತನಾಡಿದ ಸಿಎಂ, ನಿನ್ನೆಯ ಸಭೆಯಲ್ಲಿ ಸರಿಯಾದ ಮಾಹಿತಿ ಇರಲಿಲ್ಲ. ಜಿಲ್ಲೆಯ ಡಿಸಿಗಳಿಂದ ಮಾಹಿತಿ ಕೇಳಿದ್ದೇವೆ. ಯಾವುದೇ ನಿರ್ಣಯ ಆದರೂ ಸರಿಯಾದ ಮಾಹಿತಿಗಳ ಮೇಲೆ ಆಗಬೇಕು. ಹೀಗಾಗಿ ಯಾವ ರೀತಿ ಆಚರಣೆ ಮಾಡಿದರೆ ಒಳ್ಳೆಯದು ಎಂಬುದರ ಬಗ್ಗೆ ತಜ್ಞರಿಂದ ಸಲಹೆ ಕೇಳಿದ್ದೇವೆ. ಅವರು ನಾಲ್ಕೈದು ದಿನ ಸಮಯ ಕೇಳಿದ್ದಾರೆ. ಸೆಪ್ಟೆಂಬರ್ 5ರಂದು ಸಭೆ ಕರೆದಿದ್ದೇವೆ. ಅಂದೇ ಈ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತೇವೆ ಎಂದರು.