ರಾತ್ರಿ 12 ಗಂಟೆಗೆ ಕೇಕ್ ಕತ್ತರಿಸಿ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ…

64
firstsuddi

ಹುಬ್ಬಳ್ಳಿ : ನಗರದ ಖಾಸಗಿ ಹೊಟೇಲ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಕಾಂಗ್ರೆಸ್ ನಾಯಕರು ಸರಿಯಾಗಿ ರಾತ್ರಿ 12 ಗಂಟೆಗೆ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಡಿ.ಕೆ.ಶಿವಕುಮಾರ್ ತಿನ್ನಿಸಿ ಶುಭಾಶಯ ಕೋರಿದರು. ಈ ವೇಳೆ ಹಲವು ನಾಯಕರು ಭಾಗಿಯಾಗಿದ್ದರು. ಪಕ್ಷದ ವರಿಷ್ಠ ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂದು ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ನಡೆಯಲಿದೆ.