ರಾಮನವಮಿ ಆಚರಿಸಿದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ…

61
firstsuddi

ಕಲಬುರಗಿ : ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ವಿವಿಯ ಆವರಣದಲ್ಲಿ ನಿನ್ನೆ ರಾಮನವಮಿ ಆಚರಿಸಲಾಗಿದ್ದು, ಈ ವೇಳೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಘಟನೆಯಲ್ಲಿ ವಿಶ್ವನಾಥ, ನರೇಂದ್ರ ಎಂಬ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿಗಳು ಎಬಿವಿಪಿ ಸಂಘಟನೆಗೆ ಸೇರಿದವರಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಕಲಬುರಗಿ ಪೋಲೀಸ್ ವರಿಷ್ಠಾಧಿಕಾರಿ ಇಶಾ ಪಂಥ್ ಅವರು, ಕಲಬುರಗಿ ಸೆಂಟ್ರಲ್ ವಿವಿಯಲ್ಲಿ ರಾಮನವಮಿ ಗಲಾಟೆ ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದೇವೆ. ಹಲ್ಲೆ ಮಾಡಿದವರು ಕೆಲವರು ಹೊರ ರಾಜ್ಯದ ವಿದ್ಯಾರ್ಥಿಗಳಾಗಿದ್ದಾರೆ. ಘಟನೆಗೆ ರಾಮನವಮಿ ಆಚರಣೆ ಹಿನ್ನಲೆ ಗೊತ್ತಾಗಿಲ್ಲ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.