ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಿಸಿಬಿಯಿಂದ ಬಾಂಬರ್ ರೇಖಾಚಿತ್ರ ಬಿಡುಗಡೆ…

53
firstsuddi

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಶಂಕಿತ ಉಗ್ರನ ಸುಳಿವು ನೀಡಿದವರಿಗೆ 10 ಲಕ್ಷ ನಗದು ಬಹುಮಾನ ಕೊಡುವುದಾಗಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ನಿನ್ನೆ ಎನ್ಐಎ ಬಿಡುಗಡೆ ಮಾಡಿತ್ತು. ಈ ಬೆನ್ನಲ್ಲೇ ಸಿಸಿಬಿ ಪೊಲೀಸರು ಬಾಂಬರ್‌ನ ಮತ್ತೊಂದು ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

ಎನ್ಐಎ ಬಿಡುಗಡೆ ಮಾಡಿದ ಸಿಸಿಟಿವಿ ಭಾವಚಿತ್ರವನ್ನು ಆಧಾರವಾಗಿಟ್ಟುಕೊಂಡು ಖ್ಯಾತ ಸ್ಕೆಚ್ ಆರ್ಟಿಸ್ಟ್ ಹರ್ಷ ಅವರು ಆರೋಪಿ ಪೂರ್ಣ ಮುಖವನ್ನು ಊಹಿಸಿಕೊಂಡು ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶಂಕಿತ ಉಗ್ರ ಮಾಸ್ಕ್ ಧರಿಸಿದ ರೀತಿಯಲ್ಲಿ ಹಾಗೂ ವಿತೌಟ್ ಮಾಸ್ಕ್ ಟೋಪಿ ಕನ್ನಡಕ ಧರಿಸಿದ ರೀತಿ ಚಿತ್ರ ಬಿಡಿಸಿದ್ದಾರೆ. ಈ ಇಮ್ಯಾಜಿನರಿ ಸ್ಕೆಚ್ ತನಿಖೆಗೆ ಸಹಾಯವಾಗಬಹುದೆಂದು ಬೆಂಗಳೂರು ಪೊಲೀಸ್ ಮತ್ತು ಎನ್ಐಎಗೆ ಟ್ಯಾಗ್ ಮಾಡಿದ್ದಾರೆ.

ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟದ ಶಂಕಿತ ವ್ಯಕ್ತಿಯ ಮಾಸ್ಕ್ ಇಲ್ಲದ ಫೋಟೋವನ್ನು ಎನ್ಐಎ ರಿಲೀಸ್ ಮಾಡಿದ್ದು, ಶಂಕಿತ ಬಾಂಬರ್ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಎನ್ಐಎ ಘೋಷಿಸಿದೆ. ಅಲ್ಲದೆ ಮಾಹಿತಿದಾರರ ಗುರುತನ್ನು ಗೌಪ್ಯವಾಗಿ ಇರಿಸಲಾಗುವುದು ಎಂದು ಎನ್ಐಎ ಹೇಳಿದೆ. ಶಂಕಿತ ಉಗ್ರನ ಸುಳಿವು ಸಿಕ್ಕರೆ 080-29510900, 8904241100 ಸಂಖ್ಯೆಗೆ ಕರೆ ಮಾಡುವಂತೆ ಎನ್ಐಎ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. Info.blr.nia@gov.in ಗೂ ಮೇಲ್ ಮಾಡಿ ಶಂಕಿತನ ಮಾಹಿತಿಯನ್ನು ಅಧಿಕಾರಿಗಳ ಜೊತೆ ಹಂಚಿಕೊಳ್ಳಬಹುದಾಗಿದೆ.